ಉರುಳಿಬಿದ್ದ ಟಾಟಾ ಏಸ್ : ಮೂವರ ದುರ್ಮರಣ!!!

ವಿಜಯಪುರ:

      ಟಾಟ್ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ.

      ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು  ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಉರುಳಿಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಓರ್ವ ಪುರುಷ ಮತ್ತು ಇಬ್ಬರು ಮಹಿಳೆಯರು ಅಸುನೀಗಿದ್ದಾರೆ.

      ಮೃತರು ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮೂಲದವರೆಂದು ತಿಳಿದು ಬಂದಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap