ವಿಜಯಪುರ :
ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಮನೆಗೆ ನುಗ್ಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.
ಮೃತ ಚಾಲಕನನ್ನು ಮುದ್ದೇಬಿಹಾಳ ಪಟ್ಟಣ ನಿವಾಸಿ ಮಾರುತಿ ಹೊಸೂರ(30) ಎಂದು ಗುರುತಿಸಲಾಗಿದೆ.
ಕಾರು ನುಗ್ಗಿದ ರಭಸಕ್ಕೆ ರಸ್ತೆ ಪಕ್ಕದ ಮನೆ ಪೂರ್ತಿ ನೆಲಸಮವಾಗಿದೆ. ಮನೆಯಲ್ಲಿದ್ದ ಕುರಿಯೊಂದು ಸಾವನ್ನಪ್ಪಿದೆ. ಕಾರು ಚಾಲಕ ಮೃತಪಟ್ಟಿದ್ದರೆ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾದ್ದು, ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಮುದ್ದೇಬಿಹಾಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
