ಮಂಡ್ಯ:
ಮಂಡ್ಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಬೈಕ್, ಕಾರು ಮತ್ತು ಟೆಂಪೋ ಟ್ರಾವೆಲ್ಸ್ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾದೇಶ್(45), ಜೇಮ್ಸ್(30) ಮೃತರು. ಬೆಂಗಳೂರು- ಮೈಸೂರು ಹೆದ್ದಾರಿಯ ಮಂಡ್ಯದ ಸಿದ್ದಯ್ಯನ ಕೊಪ್ಪಲು ಗೇಟ್ ಬಳಿ ಅಪಘಾತ ನಡೆದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೆಂಪೋ ಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಹಿಂದೆ ವೇಗವಾಗಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದು ಸವಾರರಾದ ಮಾದೇಶ್ ಮತ್ತು ಜೇಮ್ಸ್ ಮೃತಪಟ್ಟಿದ್ದಾರೆ.
ಈ ಸರಣಿ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯ 5 ಕಿ.ಮೀವರೆಗೂ ವಾಹನ ದಟ್ಟಣೆ ಉಂಟಾಗಿತ್ತು. ವಿಷಯ ತಿಳಿದ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಅಪಘಾತಕ್ಕೀಡಾದ ವಾಹನಗಳನ್ನು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮುಗಿಲು ಮುಟ್ಟಿದ ಪೋಷಕರ ಆಕ್ರಂಧನ :
ಕೂಲಿ ಕೆಲಸಕ್ಕೆ ಹೊರಟವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಸುದ್ದಿ ತಿಳಿದ ಮೃತರ ಕುಟುಂಬ ವರ್ಗದವರು ಕಣ್ಣೀರಿಟ್ಟರು. ಆವರ ಆಕ್ರಂಧನ ಮುಗಿಲು ಮುಟ್ಟಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ