ನೆಲಮಂಗಲ : ಆಕಸ್ಮಿಕ ಬೆಂಕಿ ; ಧಗ ಧಗ ಹೊತ್ತಿ ಉರಿದ ಕಾರು!!

ಬೆಂಗಳೂರು:

      ಚಲಿಸುತ್ತಿದ್ದ ಕಾರಿನ ಇಂಜಿನ್​ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೇ ಹೊತ್ತಿ ಉರಿದ ಘಟನೆ ನೆಲಮಂಗಲದ ಅರಿಶಿನಕುಂಟೆಯ ಸಂತ ಮೇರಿ ಆಂಗ್ಲ ಪ್ರೌಢ ಶಾಲೆಯ ಮುಂದೆ ನಡೆದಿದೆ.

       ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯಲ್ಲಿ ರೆನಾಲ್ಟ್​ ಡಸ್ಟರ್​ ಕಾರಿನಲ್ಲಿ ನಾಲ್ಕು ಜನ ಸಾಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ, ಕಾರಿನಿಂದ ಇಳಿಯುತ್ತಿದಂತೆ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್​ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

      ವಿಚಾರ ತಿಳಿಯುತ್ತಿದ್ದಂತೆ ನೆಲಮಂಗಲ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದಾಗ್ಯೂ, ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap