ಹಂಪಿ ಸ್ಮಾರಕ ಧ್ವಂಸ : ಕಠಿಣ ಕ್ರಮಕ್ಕೆ ಆದೇಶ!

ಬೆಂಗಳೂರು:

      ಹಂಪಿಯಲ್ಲಿ ಐತಿಹಾಸಿಕ ಕೆತ್ತನೆಯುಕ್ತ ಕಲ್ಲು ಕಂಬಗಳನ್ನು ಉರುಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಳ್ಳಾರಿ ಜಿಲ್ಲೆ ಉಸ್ತುವಾರಿಯನ್ನೂ ಹೊತ್ತಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

      ಕೆಲವು ಕಿಡಿಗೇಡಿಗಳು ಕಂಬಗಳನ್ನು ಉರುಳಿಸಿ ವಿಕೃತಿ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ್ದೇನೆ. ಆ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಂಪಿಯ ಕಂಬಗಳನ್ನು ಉರುಳಿಸಿದ ಕಿಡಿಗೇಡಿಗಳು!

      ನಮ್ಮ ಐತಿಹಾಸಿಕ ಕುರುಹುಗಳನ್ನು ನಾಶ ಮಾಡುವುದನ್ನಾಗಲಿ, ವಿರೂಪಗೊಳಿಸುವುದನ್ನಾಗಲಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

     ಇನ್ನು ಕಿಡಿಗೇಡಿಗಳು ಸ್ಮಾರಕಗಳನ್ನ ಧ್ವಂಸಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಹಾಗೂ ಪ್ರಾಚ್ಯ ವಸ್ತು ಹಾಗೂ ಪುರಾತತ್ವ ಸರ್ವೇಕ್ಷಣಾ ಇಲಾಖೆ ಎಚ್ಚೆತ್ತುಕೊಂಡಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಹಾಗೂ ಎಎಸ್‍ಐ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap