ಬೆಂಗಳೂರು:
ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯು ಇಂದು ನಡೆಯಬೇಕಿತ್ತು. ಆದರೆ ಅದನ್ನು 8ನೇ ಎಸಿಎಂಎಂ ನ್ಯಾಯಾಲಯವು ಸೆ. 26ಕ್ಕೆ ಮುಂದೂಡಿದೆ. ನಟ ದುನಿಯಾ ವಿಜಿ ಬಂಧನ
ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಬೇಕೆಂದು ಕೋರಿ ವಿಜಯ್ ಹಾಗೂ ಆಪ್ತರು ಜಾಮೀನು ಅರ್ಜಿ ಸಲ್ಲಿಸಿದ್ದರು. ದುನಿಯಾ ವಿಜಿ ಜಾಮೀನು ಅರ್ಜಿ ವಿಚಾರಣೆ
ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶರು ಜಾಮೀನು ತೀರ್ಪನ್ನು ಕಾಯ್ದಿರಿಸಿದ್ದು, ಸೆ.26ರಂದು ಆದೇಶ ಹೊರಬೀಳಲಿದೆ. ಅಲ್ಲಿವರೆಗೂ ನಟ ದುನಿಯಾ ವಿಜಯ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಕಾಲ ತಳ್ಳುವುದು ಅನಿವಾರ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ