ರಾಜಕೀಯ ಪ್ರವೇಶಕ್ಕೂ ಮುನ್ನ ಬೆಂಗಳೂರಿಗೆ ಬಂದ ರಜನಿಕಾಂತ್!

ಬೆಂಗಳೂರು :  

     ರಾಜಕೀಯವನ್ನು ಪ್ರವೇಶಿಸಲು ಸಿದ್ಧರಾಗಿರುವ ರಜನೀಕಾಂತ್ ‌ಏಕಾಏಕಿ ಬೆಂಗಳೂರಿಗೆ ಭೇಟಿ ನೀಡಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

     ಡಿಸೆಂಬರ್ 31 ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆ ಹಾಕಿಕೊಂಡಿರುವ ರಜನಿಕಾಂತ್, ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸಹೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ.

     ಡಿ.3 ರಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿದ್ದ ರಜನಿಕಾಂತ್ , ‘ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ. ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap