ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ!!

ಬೆಂಗಳೂರು : 

      ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ.

     ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣಾ ಪ್ರಚಾರಕ್ಕೆ ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ನಟಿ ಖುಷ್ಬೂ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

     ರಾಜರಾಜೇಶ್ವರಿ ನಗರ ಕ್ಷೇತ್ರದ ಯಶವಂತಪುರ, ಲಗ್ಗರೆ ವಾರ್ಡ್, ಸಿದ್ಧಾರ್ಥ್ ನಗರದಲ್ಲಿ ನಟಿ ಖುಷ್ಬೂ ಮತಯಾಚನೆ ಮಾಡಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap