ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣು!

ಬೆಂಗಳೂರು: 

     ಸ್ಯಾಂಡಲ್ ವುಡ್ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಇಂದು(ಜ.25) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

     ನಟಿ ಜಯಶ್ರೀ ರಿಯಾಲಿಟಿ ಶೋ ಬಿಗ್‍ಬಾಸ್ ಮೂಲಕವೇ ಖ್ಯಾತಿ ಪಡೆದುಕೊಂಡಿದ್ದರು. ಈ ಹಿಂದೆ ಫೇಸ್‍ಬುಕ್‍ನಲ್ಲಿ “ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇನೆ” ಎಂದು ಪೋಸ್ಟ್ ಮಾಡಿದ್ದರು. ಜಯಶ್ರೀ ಪೋಸ್ಟ್ ಕಂಡು ಆತಂಕಕ್ಕೆ ಒಳಗಾದ ಸ್ನೇಹಿತರು ಕೂಡಲೇ ಜಯಶ್ರೀ ಅವರನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಿದ್ದರು.

     ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಿ ನಟಿ ಖಿನ್ನತೆಯಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ  ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link