ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

ಬೆಂಗಳೂರು : 

    ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ  ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

     ಈ ಬಗ್ಗೆ ಸ್ವತಃ ನಟಿಯೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸದ್ಯ ಗುಣಮುಖವಾಗ್ತಿದ್ದೀನಿ ಎಂದು   ಬರೆದುಕೊಂಡಿದ್ದಾರೆ. ಆದರೆ ಅವರಿಗೆ ಏನಾಗಿತ್ತು, ಯಾಕೆ ಆಸ್ಪತ್ರೆಗೆ ದಾಖಲಾದರು ಎಂಬ ವಿಚಾರವನ್ನು ನಟಿ ಹೇಳಿಕೊಂಡಿಲ್ಲ.

     ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸಂಜನಾ ಬೇಲ್​ ಮೇಲೆ ಹೊರಬಂದ ನಂತರ ಯಾರನ್ನೂ ಭೇಟಿಯಾಗದೆ ಕೇವಲ ಸೋಷಿಯಲ್‌ ಮೀಡಿಯಾದಲ್ಲಿ ಜನರ ಜೊತೆ ಮಾತನಾಡುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ಪೇಂಟಿಂಗ್​ ಬಿಡಿಸುವ ಪೋಸ್ಟ್​ ಒಂದನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap