ಬೆಂಗಳೂರು :
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಸ್ವತಃ ನಟಿಯೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸದ್ಯ ಗುಣಮುಖವಾಗ್ತಿದ್ದೀನಿ ಎಂದು ಬರೆದುಕೊಂಡಿದ್ದಾರೆ. ಆದರೆ ಅವರಿಗೆ ಏನಾಗಿತ್ತು, ಯಾಕೆ ಆಸ್ಪತ್ರೆಗೆ ದಾಖಲಾದರು ಎಂಬ ವಿಚಾರವನ್ನು ನಟಿ ಹೇಳಿಕೊಂಡಿಲ್ಲ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸಂಜನಾ ಬೇಲ್ ಮೇಲೆ ಹೊರಬಂದ ನಂತರ ಯಾರನ್ನೂ ಭೇಟಿಯಾಗದೆ ಕೇವಲ ಸೋಷಿಯಲ್ ಮೀಡಿಯಾದಲ್ಲಿ ಜನರ ಜೊತೆ ಮಾತನಾಡುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ಪೇಂಟಿಂಗ್ ಬಿಡಿಸುವ ಪೋಸ್ಟ್ ಒಂದನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು.