ಬೆಂಗಳೂರು :
ಸರ್ಕಾರ ಜನಪರ ಯೋಜನೆಗಳ ದುರುಪಯೋಗ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲ ಚೇತನರ ಮಾಸಾಶನ ಸೇರಿದಂತೆ ಎಲ್ಲ ಬಗೆಯ ಮಾಸಾಶನಗಳನ್ನು ಪಡೆಯಲು ಇನ್ಮುಂದೆ ಫಲಾನುಭವಿಗಳಿಗೆ ಆಧಾರ್ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಬೋಗಸ್ ಫಲಾನುಭವಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಸರ್ಕಾರಕ್ಕೆ ಸುಮಾರು 600 ಕೋಟಿ ರೂ. ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ.
ಆಧಾರ್ ಸಂಖ್ಯೆಗಳನ್ನು ಬ್ಯಾಂಕ್ ಖಾತೆಗಳಿಗೆ ಜೋಡಣೆ ಮಾಡುವ ಕಾರ್ಯವನ್ನು 6 ತಿಂಗಳೊಳಗೆ ಪೂರ್ಣಗೊಳಿಸಲಾಗುವುದು. ಆ ಬಳಿಕ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಅಶೋಕ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ