ಬೆಂಗಳೂರು
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಆರು ತಿಂಗಳು ತುಂಬಿದರೂ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೂರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ಟೀಕೆಗಳನ್ನು ಸರ್ಕಾರ ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತಿಲ್ಲ, ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸುವ ಪ್ರತಿಪಕ್ಷ ನಾಯಕರು ಟೀಕೆ ಮಾಡಬಾರದು ಎಂಬುದು ಸರಿಯಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದೆ. ಇದೇ ಕಾರಣದಿಂದ ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಮುಖ್ಯಮಂತ್ರಿಯವರು ಎರಡು ತಿಂಗಳ ಹಿಂದೆಯೇ ಸಕ್ಕರೆ ಕಾರ್ಖಾನೆ ಮಾಲಿಕರ ಜೊತೆ ಮಾತನಾಡಬೇಕಿತ್ತು. ಕೃಷಿ ಸಾಲ ಮನ್ನಾ ಕುರಿತಂತೆ ರೈತರಿಗೆ ಋಣಮುಕ್ತ ಪತ್ರ ಇನ್ನೂ ಕೊಟ್ಟಿಲ್ಲ, ಬ್ಯಾಂಕ್‍ಗಳನ್ನು ದೂರಿ ಸರ್ಕಾರ ಸಾಲಮನ್ನಾ ತಪ್ಪಿಸಲು ಸಂಚು ರೂಪಿಸಿದೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ