ನವದೆಹಲಿ :
ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ.
ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ 17 ಜನ ಅನರ್ಹರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದಲ್ಲಿ ನಡೆಯಿತು.
ನ್ಯಾ.ಮೋಹನ್ ಶಾಂತನಗೌಡರ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಆದರೆ, ಅವರು ಕರ್ನಾಟಕ ಮೂಲದವರು ಮತ್ತು ಅನರ್ಹ ಶಾಸಕ ಬಿಸಿ ಪಾಟೀಲ್ ಅವರ ದೂರದ ಸಂಬಂಧಿ. ಹೀಗಾಗಿ ಅವರು ಸ್ವಇಚ್ಛೆ ಮೇರೆಗೆ ವಿಚಾರಣೆಯಿಂದಲೇ ಹಿಂದೆ ಸರಿದಿದ್ದಾರೆ.ಹೀಗಾಗಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಹೀಗಾಗಿ ಮತ್ತೆ ಮುಖ್ಯ ನ್ಯಾಯಾಧೀಶರು ಈ ಪೀಠಕ್ಕೆ ಮತ್ತೊಬ್ಬ ನ್ಯಾಯಾಧೀಶರನ್ನು ನೇಮಕ ಮಾಡುವ ಅವಶ್ಯಕತೆ ಇದೆ ಎನ್ನಲಾಗಿದೆ.
ಪ್ರಕರಣದ ತುರ್ತು ವಿಚಾರಣೆ ಕೋರಿ ಅನರ್ಹರ ಪರ ವಕೀಲರು ಈ ಹಿಂದೆ ಮೂರು ಬಾರಿ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ಇದೀಗ ಮತ್ತೊಮ್ಮೆ ಅನರ್ಹ ಶಾಸಕರ ವಿಚಾರಣೆಯನ್ನು ಮುಂದೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ