ಏ.1ರಿಂದ ಆಗುಂಬೆ ಘಾಟ್‌ ಸಂಚಾರ ನಿಷೇಧ!!!

ಶಿವಮೊಗ್ಗ:

      ಏಪ್ರಿಲ್‌ 1ರಿಂದ ಆಗುಂಬೆ ಘಾಟ್ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

      ರಾಷ್ಟ್ರಿಯ ಹೆದ್ದಾರಿ 169ಎ ವ್ಯಾಪ್ತಿಯಲ್ಲಿ ಬರುವ ಆಗುಂಬೆ ಘಾಟಿಯ 33.70 ಮತ್ತು 37.018 ಕಿ.ಮೀ. ಗಳಲ್ಲಿ ಮಳೆಗಾಲದಲ್ಲಿ ಗುಡ್ಡ ಕುಸಿದಿತ್ತು.  ಈ ಹಿನ್ನೆಲೆಯಲ್ಲಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗವು ಕಾಮಗಾರಿ ಕೈಗೊಳ್ಳುತ್ತಿದೆ. ಕಾಮಗಾರಿಗೆ ಅವಕಾಶ ನೀಡುವ ಉದ್ದೇಶದಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ. 

      ಕುಸಿದಿರುವ ಗುಡ್ಡಗಳ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ  ಏಪ್ರಿಲ್ 1 ರಿಂದ 30 ರವರೆಗೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

      ಆಗುಂಬೆಯಲ್ಲಿರುವ ಸರ್ಕಾರಿ ಶಾಲೆ ಮತ್ತು ಎಸ್ ವಿ ಎಸ್ ಶಾಲೆಗಳಿಗೆ ವಿದ್ಯಾರ್ಥಿಗಳು ಓಡಾಡಬೇಕಾದ ಅವಶ್ಯಕತೆ ಇರುವುದರಿಂದ ಮಿನಿ ಬಸ್ ಗಳನ್ನು ಆಗುಂಬೆ ಬಿದರಗೋಡು ಶೃಂಗೇರಿ ಮೂಲಕ ಸಂಚರಿಸುವುದು. ಸಾಮಾನ್ಯ ಬಸ್ ಗಳನ್ನು ತೀರ್ಥಹಳ್ಳಿ ಕಲ್ಮನೆ ರಾಮಕೃಷ್ಣಪುರ ಕಮ್ಮರಡಿ ಶೃಂಗೇರಿ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.

      ಕಾಮಗಾರಿ ನಡೆಯುವ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಘಾಟಿ ರಸ್ತೆಯ ದುರಸ್ತಿಗೆ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap