ಶಿವಮೊಗ್ಗ :
ಆಗುಂಬೆ ಘಾಟ್ ನಲ್ಲಿ ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.
ಹೌದು, ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1 ರಿಂದ 31 ರ ವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದು, ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ.
ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್.ಸಿ.ವಿ, ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು.
ಇನ್ನು ಭಾರಿ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ, ಲಕ್ಸುರಿ ಬಸ್ ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ