ಬೆಂಗಳೂರು:
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಔಟ್ ಆಗಿದ್ದಾರೆ. ಅವರ ಸ್ಥಾನಕ್ಕೆ ಡಾ.ಬಿ.ಪುಷ್ಪಾ ಅಮರ್‌ನಾಥ್ ಅವರನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದರಿಂದಾಗಿ ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ಮೇಲುಗೈ ಸಾಧಿಸಿದಂತಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಕಿಹೊಳಿ ಸಹೋದರರನ್ನು ರಾಜಕೀಯವಾಗಿ ವಿರೋಧಿಸಿದ್ದಕ್ಕೆ ಅವರ ತಲೆದಂಡ ನೀಡಲಾಗಿದೆ ಎಂದು ಈ ಘಟನೆಯನ್ನು ವಿಶ್ಲೇಷಿಸಲಾಗುತ್ತಿದೆ.
ಪುಷ್ಪಾ ಅವರು ಮೈಸೂರು ನಗರದವರಾಗಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ ಅವರ ಬೆಂಬಲಿಗರಾಗಿ ಇವರು ಗುರುತಿಸಿಕೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
