ಬೆಳಗಾವಿ:
‘ರೈತರ ಸಂಪೂರ್ಣ ಸಾಲಮನ್ನಾ ಮಾಡಲಾಗುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
‘ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಅಲ್ಲದೆ, ಭಾರೀ ಮಳೆಯಿಂದ ದೊಡ್ಡ ಅನಾಹುತವೇ ಆಗಿದೆ. ಸಾವಿರಾರು ಜನರಿಗೆ ತೊಂದರೆಯಾಗಿದೆ. ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ, ಹಣವನ್ನು ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳುವ ಪರಿಸ್ಥಿತಿ ಬಂದಿದೆ’ ಎಂದರು.
ನಾವು ಪ್ರಮಾಣ ಮಾಡಿದಂತೆ ಬೆಳೆಗೆ ಹೆಚ್ಚು ಪರಿಹಾರ ಮತ್ತು ಮನೆ ಕಟ್ಟಿಕೊಳ್ಳಲು ಹೆಚ್ಚು ಪರಿಹಾರ ನೀಡುತ್ತಿದ್ದೇವೆ. ನಮ್ಮ ದೇಶದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಆದ್ದರಿಂದ ಬೇರೆ ಯಾವುದನ್ನೂ ಮಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳುವ ಮೂಲಕ ಸಂಪೂರ್ಣ ಸಾಲ ಮನ್ನಾ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ