ಬೆಂಗಳೂರು :
ಪ್ರಸಕ್ತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದಾಗಿ ಬಿಜೆಪಿ ಕೇಂದ್ರ ನಾಯಕರಿಗೆ ತರಾತುರಿಯಲ್ಲಿ ಹೊಸ ಸರ್ಕಾರ ರಚನೆ ಮಾಡುವುದು ಇಷ್ಟವಿಲ್ಲದಿದ್ದರೂ ರಾಜ್ಯ ಬಿಜೆಪಿ ನಾಯಕರ ಮನವಿ ಮೇರೆಗೆ ಇದಕ್ಕೆ ಸಮ್ಮತಿಸಲಾಗಿದೆ ಎಂದು ಹೇಳಲಾಗಿದೆ.
ಸರ್ಕಾರ ರಚನೆಗೆ ಒಪ್ಪಿಗೆ ನೀಡುವ ಮುನ್ನ ಬಿಜೆಪಿ ಕೇಂದ್ರ ನಾಯಕರು ಎರಡು ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆಂದು ಹೇಳಲಾಗಿದೆ. 1. ನಿಮ್ಮ ಜವಾಬ್ದಾರಿಯಲ್ಲಿ ಸರ್ಕಾರ ರಚಿಸಲು ಸಾಧ್ಯವೇ? 2. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಬೀಡುಬಿಟ್ಟಿರುವ ಶಾಸಕರುಗಳ ಜವಾಬ್ದಾರಿಯನ್ನು ನೀವೇ ತೆಗೆದುಕೊಳ್ಳುವಿರಾ? ಎಂದು ಪ್ರಶ್ನಿಸಿದರು ಎಂದು ತಿಳಿದುಬಂದಿದೆ. ‘ಆ ವಿಚಾರ ನನಗೆ ಬಿಡಿ, ನೀವು ಗ್ರೀನ್ ಸಿಗ್ನಲ್ ಕೊಡಿ’ ಎಂದು ಯಡಿಯೂರಪ್ಪ ಮನವಿ ಮಾಡಿದರು ಎಂದು ಹೇಳಲಾಗಿದೆ.
ಇಂದು ಸಂಜೆ 6 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
