ಶಿರಸಿ:
ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್ ನ ಮಹಾಭಾರತ ಕೊನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ಇಂದಿರಾಗಾಂಧಿ ಎಂಬಂತೆ ವರ್ಣಿಸಲಾಗುತ್ತಿದೆ. ಆದರೆ ಅವರ ಬಂಡಾಳವೂ ಸದ್ಯವೇ ಬಯಲಾಗಲಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.
ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ರಾಷ್ಟ್ರದ್ರೋಹಿಗಳನ್ನು ಇಟ್ಟಿದೆ. ಮಾಧ್ಯಮಗಳಲ್ಲೂ ನಗರ ನಕ್ಸಲರನ್ನು ಇಟ್ಟಿರುವುದಾಗಿ ಗಂಭೀರವಾಗಿ ಆರೋಪ ಮಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶದಲ್ಲಿ ಕುಟುಂಬ ರಾಜಕಾರಣ ಮಾಡುತ್ತಲೇ ದೇಹದ್ರೋಹಿಗಳನ್ನು ಬೆಳೆಸುತ್ತಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ