ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ

ಬೆಂಗಳೂರು: 

     ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ ಗೆದ್ದಿದ್ದ ಅನಿತಾ ಕುಮಾರಸ್ವಾಮಿಯವರು ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

      ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಗೋಪಾಲಯ್ಯ ಸೇರಿದಂತೆ ಹಲವರ ಸಮ್ಮುಖದಲ್ಲಿ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 

      ವಿಧಾನಸಭೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಅನಿತಾಕುಮಾರಸ್ವಾಮಿ ಅವರಿಗೆ ಬೋಧಿಸಿದರು.

      ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾಕುಮಾರಸ್ವಾಮಿ, ತಮ್ಮನ್ನು ಆಯ್ಕೆ ಮಾಡಿದ ರಾಮನಗರ ಕ್ಷೇತ್ರದ ಜನರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ಎರಡನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ರಾಮನಗರ ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಭರವಸೆ ನೀಡಿದರು. ತಮಗೆ ಸಚಿವ ಸ್ಥಾನ ಸಿಗುವುದರ ಬಗ್ಗೆ ಇದುವರೆಗೂ ಮಾಹಿತಿ ಇಲ್ಲ. ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap