ಕಲಬುರಗಿ :
ಕಲಬುರಗಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದುಬೈನಿಂದ ಕಲಬುರಗಿಗೆ ಬಂದಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ 63 ವರ್ಷದ ವೈದ್ಯನಿಗೂ ಇದೀಗ ಕೊರೊನಾ ವೈರಸ್ ಪಾಸಿಟಿವ್ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಮೃತ ವೃದ್ಧನಿಗೆ ಮನೆಗೆ ತೆರಳಿ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಕೊರೊನಾ ಪಾಸಿಟಿವ್ ಇದೆ. ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ವೈದ್ಯನನ್ನು ಆಸ್ಪತ್ರೆಯ ಐಸೋಲೇಷನ್ ವಾರ್ಡ್ಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
ಮಾರ್ಚ್ 6 ರಿಂದ 9 ರ ವರೆಗೆ ಕೊರೊನಾ ವೈರಸ್ ಸೋಂಕಿತ ವೃದ್ಧನಿಗೆ ಚಿಕಿತ್ಸೆ ನೀಡಿದ್ದರು. ವೈದ್ಯನಿಗೆ ಇದೀಗ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ ಹಾಗೆ 60 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಿಬ್ಬರು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ, ಶೀಘ್ರ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ಹೊಂದಿದ್ದೇನೆ ಎಂದು ಇಂದು ಬೆಳಗ್ಗೆ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ