ಬೆಂಗಳೂರು :
ರಾಜ್ಯದಲ್ಲಿ ಇಂದು ಮತ್ತೊಬ್ಬ ವ್ಯಕ್ತಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದ್ದು, ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 27ಕ್ಕೆ ಏರಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ದುಬೈಯಿಂದ ಬಂದಿದ್ದ ಮೈಸೂರು ಮೂಲದ 46 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ 15 ಲಕ್ಷ ಮಾಸ್ಕ್ ಗಳನ್ನು, 1 ಸಾವಿರ ವೆಂಟಿಲೇಟರ್ 5 ಲಕ್ಷ ಪಿಪಿಇ ಕಿಟ್ ಖರೀದಿ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಿನ್ನೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಸ್ಕ್ಯಾನರ್ ಕಂಪನಿ ಜೊತೆ ವೆಂಟಿಲೇಟರ್ ಪೂರೈಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದೇವೆ. ಖಾಸಗಿ ಆಸ್ಪತ್ರೆಯಲ್ಲಿ 30% ವೆಂಟಿಲೇಟರ್ ಇಡಬೇಕು ಎಂದು ಸೂಚನೆ ನೀಡಿದ್ದೇವೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ