ತುಮಕೂರು :
ಜಾರಿ ನಿರ್ದೇಶನಾಲಯದಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಇಂದು ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.
ಅಪೆಕ್ಸ್ ಬ್ಯಾಂಕ್ ಸೇರಿದಂತೆ ವಿವಿಧ ಜಿಲ್ಲಾ ಸಹಕಾರ ಬ್ಯಾಂಕ್ ಗಳ ಮೂಲಕ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷ ಸಕ್ಕರೆ ಕಾರ್ಖಾನೆಗೆ 300 ಕೋಟಿ ರೂ. ಸಾಲ ನೀಡಿದ್ದಾರೆ ಎನ್ನಲಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಡಿ.ಕೆ. ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಚಾರಣೆ ಸಂದರ್ಭದಲ್ಲಿ ಈ ಮಾಹಿತಿ ಗೊತ್ತಾಗಿದ್ದು ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ರಾಜಣ್ಣ ಅವರಿಗೆ ನೋಟಿಸ್ ನೀಡಿದ್ದಾರೆ.
ಈ ಸಂಬಂಧ ಜಾರಿ ನಿರ್ದೇಶನಾಲಯದಿಂದ ಸೆ.24ರಂದು ಕೋರಿಯರ್ ನಲ್ಲಿ ನೋಟಿಸ್ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಗೆ ತೆರಳಿರುವ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಇಂದು ಬೆಳಗ್ಗೆ 11 ಗಂಟೆಗೆ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ