ರಾಮನಗರ :
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯ ಮತ್ತೀಕೆರೆ ಶಿವಳ್ಳಿ ಹೋಟೆಲ್ ಬಳಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ರಾಹುಲ್ (18) ಅಭಿಷೇಕ್ (20) ಮೃತ ದುರ್ದೈವಿಗಳು. ಕಾರು ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿತ್ತು ಎನ್ನಲಾಗಿದೆ. ಡಿವೈಡರ್ ದಾಟಿ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಪಾದಚಾರಿ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ