ಬೆಂಗಳೂರು:

ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಬಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಅವರನ್ನು ಪೊಲೀಸರು ಅಹಮದಾಬಾದ್‍ನಿಂದ ಬೆಂಗಳೂರಿಗೆ ಕರೆತಂದಿದ್ದಾರೆ.
ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದ ಶಾಸಕ ಗಣೇಶ್ನನ್ನು ನಿನ್ನೆ ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದು, ಅಹಮದಾಬಾದ್‍ನಿಂದ ಬಂಧಿಸಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬಿಡದಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ.
ಇದಕ್ಕೂ ಮೊದಲು ವೈದ್ಯಕೀಯ ಪರೀಕ್ಷೆಗಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಬಿಡದಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗುತ್ತದೆ. ಆರೋಪಿ ಶಾಸಕರನ್ನು ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದು, 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಅನುಮತಿ ನೀಡುವಂತೆ ಈಗಾಗಲೇ ಬಿಡದಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಜನವರಿ 19 ರಂದು ರಾತ್ರಿ ಈಗಲ್ಟನ್ ರೆಸಾರ್ಟ್ ನಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ನಡೆಸಿದ್ದರು. ನಂತರ ಜ.21 ರಂದು ಅವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಆ ನಂತರ ಗಣೇಶ್ ತಲೆಮರೆಸಿಕೊಂಡಿದ್ದರು.
ಘಟನೆ ನಡೆದ ಒಂದು ತಿಂಗಳ ನಂತರ ರಾಮನಗರ ಪೊಲೀಸರು ಗಣೇಶ್ ಅವರನ್ನು ಬಂಧಿಸಿದ್ದು, ಇಂದೇ ರಾಮನಗರಕ್ಕೆ ಕರೆತಂದು ಸ್ಥಳೀಯ ನ್ಯಾಯಾಲಯದ ಮುಂದೆ ಗಣೇಶ್ ಅವರನ್ನು ಹಾಜರುಪಡಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








