ಬೆಂಗಳೂರು :
ರಾಜಧಾನಿಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಮಹಾಮಾರಿ ಬೆಂಗಳೂರಿನ ವಿ.ವಿ.ಪುರಂ ಎಎಸ್‌ಐ ರನ್ನು ಬಲಿ ಪಡೆದಿದೆ.
ಜೂನ್ 13 ರಂದು ಮೃತಪಟ್ಟಿದ್ದರು. ಮೃತಪಟ್ಟ ಬಳಿಕ ಎಎಸ್‌ಐ ಅವರ ಗಂಟಲು ದ್ರವವನ್ನು ಕೊವಿಡ್ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇದೀಗ ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಮೃತ ಎಎಸ್‌ಐಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ