ಶಿವಮೊಗ್ಗ :
ಶ್ರೀಗಂಧ ಮರ ಕಳ್ಳಸಾಗಾಣಿಕೆಯನ್ನು ತಡೆಯಲು ಹೋದ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆಗ್ಗಸಗೆ ಗ್ರಾಮದಲ್ಲಿ ನಡೆದಿದೆ.
ಡಿ.ಆರ್.ಎಫ್.ಓ. ಗೋವಿಂದರಾಜು ಮತ್ತು ಸಿಬ್ಬಂದಿಯ ಮೇಲೆ ದಾಳಿ ನಡೆಸಲಾಗಿದೆ. ಕುಮಾರ್ ಮತ್ತು ಮೋಹನ್ ಸೇರಿ 5 ಮಂದಿ ಇದ್ದ ತಂಡ ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ.
ಗಂಧ ಕಳ್ಳಸಾಗಾಣಿಕೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ಸೊನಲೆ ಸಮೀಪದ ಹೆಗ್ಗರಸು ಗ್ರಾಮಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದ ಮೇಲೆ ದುಷ್ಕರ್ಮಿಗಳು ಗಂಧದ ತುಂಡು ಮತ್ತು ಮಚ್ಚು ಮುಂತಾದ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.
ದಾಳಿ ವೇಳೆ ಮಚ್ಚು ಮತ್ತು ಶ್ರೀಗಂಧ ಮರದ ತುಂಡುಗಳಿಂದ ಆರೋಪಿಗಳು ಹಲ್ಲೆ ನಡೆಸಿದ್ದು, ಗೋವಿಂದರಾಜು ತಲೆ, ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ