ಭೀಕರ ಅಪಘಾತ : ತಾಯಿ-ಮಗ ಸೇರಿ ಮೂವರ ದುರ್ಮರಣ!!!

ಯಾದಗಿರಿ :

      ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ನಗರದ ಗಡೇಸೂಗುರ್ ಗೇಟ್ ಬಳಿ ನಡೆದಿದೆ.

       ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದ ಬಾಷಪ್ಪ (35), ರಮೇಶ್ (30), ಸಿದ್ದಮ್ಮ (55) ಎಂಬುವರು ಮೃತ ದುರ್ದೈವಿಗಳು. ರಮೇಶ್ ಮತ್ತು ಸಿದ್ದಮ್ಮ ತಾಯಿ-ಮಗ ಅಂತ ತಿಳಿದು ಬಂದಿದೆ.

      ಯಾದಗಿರಿಯಿಂದ ವಡೇಗೇರಾದಲ್ಲಿ ಕಡೆ ತೆರಳುತ್ತಿದ್ದ ಆಟೋ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

     ಇನ್ನು ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link