‘ರಾಜ್ಯದಲ್ಲಿ 120 ಸ್ಥಾನ ಬಿಜೆಪಿಗೆ’ : ಮತ್ತೊಮ್ಮೆ BSY ಎಡವಟ್ಟು

ತುಮಕೂರು: 

     ‘ಭಾರತೀಯ ಜನತಾ ಪಕ್ಷ ಕರ್ನಾಟಕದಲ್ಲಿ 120 ಸೀಟು ಗೆಲ್ಲುತ್ತದೆ’ ಎಂದು ಹೇಳಿ ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಯಡವಟ್ಟು ಮಾಡಿಕೊಂಡಿದ್ದಾರೆ

      ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸುಮಾರು ಎರಡು ಸಾವಿರ ಬೈಕ್‍ಗಳ ಸಂಕಲ್ಪಯಾತ್ರೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಕ್ತಿ ಮೀರಿ ಕೆಲಸ ಮಾಡುವ ಮೂಲಕ ಕರ್ನಾಟಕದಲ್ಲಿ 120ಕ್ಕೂ(ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರ ಇರೋದು) ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕು ಎಂದಿದ್ದರು.

      ನಂತರ ತಮ್ಮ ಯಡವಟ್ಟಿನ ಬಗ್ಗೆ ತಕ್ಷಣ ಯಡಿಯೂರಪ್ಪ ಎಚ್ಚೆತ್ತುಕೊಂಡು ರಾಜ್ಯದಲ್ಲಿ ಕನಿಷ್ಟ 22 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಮಾಧ್ಯಮದೊಂದಿಗೆ ಮಾತನಾಡುವ ಭರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕರ್ನಾಟಕದಲ್ಲಿ 120ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಗೆಲ್ಲಬೇಕು ಎಂಬ ಉದ್ದೇಶ ಹೊಂದಲಾಗಿದೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಯಡವಟ್ಟು ಮಾಡಿಕೊಂಡಿದ್ದಾರೆ.

      ದೇಶದಲ್ಲಿ 300ಕ್ಕೂ ಅಧಿಕ ಸ್ಥಾನ ಗಳಿಸಿ ಭಾರತೀಯ ಜನತಾ  ಪಕ್ಷ ಮತ್ತೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ತಿಳಿಸಿದ್ದರು. ಮುಂದಿನ ವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು ಈ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಟಿಕೆಟ್ ಹಂಚಿಕೆ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

      ಇಂದು ಬೆಳಗ್ಗೆ ತುಮಕೂರಿಗೆ ಆಗಮಿಸಿದ ಯಡಿಯೂರಪ್ಪ ಅವರು , ಮೊದಲಿಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಶ್ರೀ ಶಿವಕುಮಾರಸ್ವಾಮೀಜಿ ಅವರ ಲಿಂಗೈಕ್ಯ ಮಂಟಪಕ್ಕೆ ತೆರಳಿ ಪೂಜೆ ಸಲ್ಲಿಸಿದರು.

      ಇತ್ತೀಚೆಗೆ ಭಾರತ ಪಾಕ್ ಉಗ್ರರ ಮೇಲೆ ನಡೆಸಿದ್ದ ದಾಳಿ ಕುರಿತು ರಾಜಕೀಯ ಲಾಭದ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶನಿವಾರ, ಭಾರತೀಯ ಜನತಾ ಪಕ್ಷ ಕರ್ನಾಟಕದಲ್ಲಿ 120 ಸೀಟು ಗೆಲ್ಲುತ್ತದೆ ಎಂದು ಹೇಳುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ!

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 
 

Recent Articles

spot_img

Related Stories

Share via
Copy link
Powered by Social Snap