ಆಡಿಯೋ ಪ್ರಕರಣ : ಬಿಎಸ್ವೈ ಗೆ ಬಿಗ್ ರಿಲೀಫ್!!!

ಕಲಬುರ್ಗಿ :

       ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಗುರುಮಿಟ್ಕಲ್ ಶಾಸಕ ನಾಗನಗೌಡ ಪಾಟೀಲ್ ಅವರ ಮಗ ಶರಣುಗೌಡ ಅವರಿಗೆ ಆಮಿಷವೊಡ್ಡಿದ  ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿ.ಎಸ್​. ಯಡಿಯೂರಪ್ಪನವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

      ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ನೀಡಿದ್ದ ದೂರಿನ ಮೇರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ದೇವದುರ್ಗ ಬಿಜೆಪಿ‌ ಶಾಸಕ ಶಿವನಗೌಡ ನಾಯಕ್, ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ, ಮಾಜಿ ಪತ್ರಕರ್ತ ಮರಮಕಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕಲಬುರ್ಗಿ ಹೈಕೋರ್ಟ್​ ಪೀಠದ ನ್ಯಾಯಮೂರ್ತಿಗಳು ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.

      ಪ್ರಕರಣ ರದ್ದು ಕೋರಿ ಬಿಎಸ್​ವೈ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಸಲ್ಲಿಕೆಯಾಗಿದ್ದ ಎಫ್​ಐಆರ್​ಗೆ ಕಲಬುರ್ಗಿ ಹೈಕೋರ್ಟ್​ ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link