ಚಿಕ್ಕಮಗಳೂರು:
ಜ್ಯೂಸ್ ಎಂದು ತಿಳಿದು ಕಳೆನಾಶಕವನ್ನು ಕುಡಿದು ಮಗುವೊಂದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರ ಅಗಸ್ತ್ಯ (3) ಮೃತ ಬಾಲಕ.
ಅಕ್ಟೋಬರ್ 24ರಂದು ಜ್ಯೂಸ್ ಎಂದು ಭಾವಿಸಿ ಕಳೆನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. 18 ದಿನಗಳಿಂದ ಅಗಸ್ತ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ