ಬಾಗಲಕೋಟೆ :
ಧಾರ್ಮಿಕ ಮತ್ತು ಪ್ರವಾಸಿ ಕೇಂದ್ರವಾಗಿರುವ ಕೂಡಲಸಂಗಮಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲಾಗಿದೆ.
ರಾಜ್ಯದ ಪ್ರಮುಖ ಧಾರ್ಮಿಕ ತಾಣಗಳಲ್ಲಿ ಒಂದಾದ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಐಕ್ಯ ಮಂಟಪದ ಬಾವಿ 1978 ರಲ್ಲಿ ನಿರ್ಮಾಣವಾಗಿತ್ತು. ಈ ಮಂಟಪದಲ್ಲಿನ ಬಾವಿ ಆಗಾರದ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಇದು ಅಪಾಯಕ್ಕೆ ಎಡೆಮಾಡಿಕೊಡುವಂತಿತ್ತು. ಯಾವುದೇ ಸಂದರ್ಭದಲ್ಲಿ ಬೇಕಾದರೂ ಅದು ಕುಸಿದು ಬೀಳುವ ಸಂಭವ ಇರುವುದರಿಂದ ಅಲ್ಲಿಗೆ ಭೇಟಿ ನೀಡುವ ಭಕ್ತರಿಗೆ ಹಾನಿಯಾಗುವ ಅಪಾಯವಿದೆ ಎನ್ನಲಾಗಿದೆ.
ಈ ಬಗ್ಗೆ ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ ಅದರ ದುರಸ್ತಿಗೆ ಮುಂದಾಗಿದೆ. ಹೀಗಾಗಿ ಐಕ್ಯ ಮಂಟಪದೊಳಗೆ ಪ್ರವೇಶಿಸಲು ಭಕ್ತರಿಗೆ ಮುನ್ನೆಚ್ಚರಿಕೆಯಿಂದ ನಿರ್ಬಂಧ ವಿಧಿಸಲಾಗಿದೆ. ದುರಸ್ತಿ ಕಾರ್ಯ ಮುಗಿಯುವವರೆಗೂ ಈ ನಿರ್ಬಂಧ ಮುಂದುವರಿಯಲಿದೆ ಎನ್ನಲಾಗಿದೆ.
ಮಂಟಪ ನಿರ್ವಹಣೆಯಲ್ಲಿ ಪ್ರಾಧಿಕಾರದ ನಿರ್ಲಕ್ಷ್ಯದಿಂದ ಅಪಾಯದ ಅಂಚಿಗೆ ತಲುಪಿದೆ ಎಂದು ಆರೋಪಿಸಲಾಗಿದ್ದು, ಇದನ್ನು ದುರಸ್ತಿಪಡಿಸಲು ಕ್ರಿಯಾಯೋಜನೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ