ಪಾಕ್ ಪರ ವಾಟ್ಸ್ಆಪ್ ನಲ್ಲಿ ಘೋಷಣೆ : ಅಡ್ಮಿನ್ ಗೆ ಜಾಮೀನು ರದ್ದು!!

ಬೆಂಗಳೂರು: 

     ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದರಲ್ಲಿ ಸದಸ್ಯರು “ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಗ್ರೂಪ್‌ ಅಡ್ಮಿನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. 

      ನಿರೀಕ್ಷಣಾ ಜಾಮೀನು ಕೋರಿ ವಾಟ್ಸ್‌ಆ್ಯಪ್‌ ಗ್ರೂಪ್‌ನ ಅಡ್ಮಿನ್‌ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಭಟ್ಟರ ನರಸಾಪುರ ನಿವಾಸಿ ಮುಸ್ತಫಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆ.ಎಸ್‌. ಮುದಗಲ್‌ ಅವರಿದ್ದ ಧಾರವಾಡ ಹೈಕೋರ್ಟ್‌ ನ್ಯಾಯಪೀಠ ವಜಾಗೊಳಿಸಿದೆ.

ಪ್ರಕರಣ:

Related image

      ಕಳೆದ ಆಗಸ್ಟ್‌ 14ರಂದು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ವಾಟ್ಸಾಪ್‌ ಗ್ರೂಪ್‌ನಲ್ಲಿ ಹಾಕಲಾಗಿತ್ತು. ಈ ಕುರಿತು ಇವರ ಮೇಲೆ ರಾಜದ್ರೋಹದ ಪ್ರಕರಣ ದಾಖಲಿಸಬೇಕೆಂದು ಹನುಮನಗೌಡ ಎಂಬುವರು ಕೊಪ್ಪಳದ ಕನಕಗಿರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.  ಈ ಹಿನ್ನೆಲೆಯಲ್ಲಿ ಮುಸ್ತಫಾ, ಶಬ್ಬೀರ್‌ ಸಾಬ್‌, ಚಾಂದ್‌ ಪಾಷಾ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.

      ವಾಟ್ಸಾಪ್‌ ಗ್ರೂಪ್‌ನಲ್ಲಿ ಹಾಕಿರುವ ಘೋಷಣೆ ಒಂದೆರಡು ವಾಕ್ಯ ಇರಬಹುದು. ಆದರೆ ಅದರ ಉದ್ದೇಶ, ಪರಿಣಾಮ ಗಂಭೀರವಾಗಿದೆ ಎಂದು ನ್ಯಾಯಮೂರ್ತಿ ಎನ್‌.ಕೆ. ಸುಧೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

      ಜಾಮೀನು ಮಂಜೂರು ಮಾಡಲು ಆರೋಪಿಯು ಸೂಕ್ತ ಕಾರಣಗಳನ್ನು ಒದಗಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾ. ಮುದಗಲ್‌ ಅವರಿದ್ದ ನ್ಯಾಯಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿ ಆದೇಶಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 
 

 

 

Recent Articles

spot_img

Related Stories

Share via
Copy link
Powered by Social Snap