ಚಾಮರಾಜನಗರ :
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಕ್ಕೆ ಒಂದು ವಾರಗಳ ಕಾಲ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರದಲ್ಲಿ ಸಫಾರಿಯನ್ನು ನಿರ್ಬಂಧಿಸಲಾಗಿದೆ.
ಹೌದು, ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ ಝೋನ್ ನಾಶವಾಗಿದೆ. ಕಾಡ್ಗಿಚ್ಚಿನಿಂದ ಬಂಡಿಪುರದ ಸುಮಾರು 5 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ನಾಶವಾಗಿದೆ.
ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸ ಪಟ್ಟಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸಫಾರಿ ಝೋನ್‍ನಲ್ಲಿ ಸಫಾರಿ ಬಂದ್ ಮಾಡಲಾಗಿದೆ. ನೂರಾರು ಪ್ರವಾಸಿಗರು ಸಫಾರಿಗಾಗಿ ಪ್ರತಿ ನಿತ್ಯ ಬಂಡಿಪುರಕ್ಕೆ ಬರುತ್ತಿದ್ದರು. ಸಫಾರಿಯಿಂದ ತಿಂಗಳಿಗೆ ಬಂಡಿಪುರದಲ್ಲಿ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿತ್ತು. ಆದ್ರೆ ಕಳೆದ ನಾಲ್ಕೈದು ದಿನಗಳಿಂದ ಅರಣ್ಯದಲ್ಲಿ ಹೊತ್ತಿಕೊಂಡಿರುವ ಕಾಡ್ಗಿಚ್ಚಿನಿಂದ ಪ್ರವಾಸಿಗರಿಲ್ಲದೆ ಬಂಡಿಪುರ ಬಿಕೋ ಎನ್ನುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ