ಬೆಂಗಳೂರು :
ಬೆಂಗಳೂರಿನಲ್ಲಿ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ರಸ್ತೆಗಿಳಿದ 3151 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮಾರಕ ಕೊರೊನಾ ವೈರಸ್ ರಾಜ್ಯದ್ಯಂತ ಆತಂಕ ಸೃಷ್ಟಿಸಿದ್ದು, ಜನತೆ ಆತಂಕಗೊಂಡಿದ್ದಾರೆ. ಸೋಂಕು ಹರಡದಂತೆ ದೇಶಾದ್ಯಂತ ಏ.14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆದರೆ, ಜನತೆ ಮಾತ್ರ ಲಾಕ್ ಡೌನ್ ಆದೇಶಕ್ಕೆ ಕ್ಯಾರೆ ಅನ್ನದೇ ಉಲ್ಲಂಘಿಸುತ್ತಿದ್ದಾರೆ. ಲಾಕ್ ಡೌನ್ ಆದೇಶ ಉಲ್ಲಂಘಿಸಿದ 3151 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಲಾಕ್ ಡೌನ್ ಆದೇಶ ಉಲ್ಲಂಘಿಸಿದ 3151 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ 2883 ದ್ವಿಚಕ್ರ ವಾಹನಗಳು ಹಾಗೂ 107 ಆಟೋಗಳಿವೆ. ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ಧ ಕೇಂದ್ರ ಸರ್ಕಾರದ ಎನ್.ಡಿ.ಎಂ.ಎ ಕಾಯಿದೆಯನ್ವಯ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.
ಕೊರೊನಾ ಪಾಸ್ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಈ ಕುರಿತಂತೆಯೂ ತನಿಖೆ ನಡೆಸಲಾಗುತ್ತಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/Bangalore-vehicles.gif)