ಬೆಂಗಳೂರು:
ಯಲಹಂಕ ವಾಯುನೆಲೆಯಲ್ಲಿ ಶನಿವಾರ ಮತ್ತೆ ಸಂಭವಿಸಿದ ಭಾರೀ ಅಗ್ನಿ ಅನಾಹುತದಿಂದ ಸ್ಥಗಿತಗೊಂಡಿದ್ದ ಏರ್ ಶೋ ಪುನರಾರಂಭಗೊಂಡಿದೆ.
ಯಲಹಂಕ ವಾಯುನೆಲೆಯ ಗೇಟ್ ನಂ 5ರ ಸಮೀಪದ ಪಾರ್ಕಿಂಗ್ ಸ್ಥಳದಲ್ಲಿ ಒಣ ಹುಲ್ಲಿಗೆ ಮೊದಲು ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್, ಐಶಾರಾಮಿ ಕಾರು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಕಾರುಗಳು ಭಸ್ಮವಾಗಿದ್ದವು. ಹತ್ತಕ್ಕೂ ಅಧಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೂರು ಗಂಟೆಗಳ ಕಾಲ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದರು.
ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಕ್ತಿ ಮೀರಿ ಶ್ರಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ಅಗ್ನಿಶಾಮಕ ದಳದ ಡಿಜಿಪಿ ಎಂಎನ್ ರೆಡ್ಡಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ