ಬಿಬಿಎಂಪಿ ಗೆಲುವು : ಸಮ್ಮಿಶ್ರ ಸರ್ಕಾರ ಸದೃಢವಾಗಿರುವುದರ ಸಂಕೇತ

ಬೆಂಗಳೂರು:

      ಬಿಬಿಎಂಪಿ ಗದ್ದುಗೆಗೇರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ದೋಸ್ತಿ ಸರ್ಕಾರದ ಆಭ್ಯರ್ಥಿಗಳ ಗೆಲುವು ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸದೃಢವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.‌

      ಮೇಯರ್ ಆಗಿ ಆಯ್ಕೆಯಾದ ಗಂಗಾಂಬಿಕ ಮಲ್ಲಿಕಾರ್ಜುನ್ ಹಾಗೂ ಉಪಮೇಯರ್ ರಮೀಳಾ ಉಮಾಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಬಿಬಿಎಂಪಿ ಚುನಾವಣೆಯಲ್ಲಿ ಮೇಯರ್ ಗೆ 130 ಹಾಗೂ ಉಪಮೇಯರ್ ಗೆ 129 ಮತಗಳು ಪಡೆದು  ಅಧಿಕಾರವನ್ನು ನಮ್ಮದಾಗಿಸಿಕೊಂಡಿದ್ದೇವೆ. ಈ ಮೂಲಕ ಬಿಜೆಪಿಗೆ ಮುಖಭಂಗವಾಗಿದೆ ಎಂದರು.

      ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯುವ ಬಿಜೆಪಿ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಜೆಡಿಎಸ್ ಗೆ ಗೆಲುವು ಸಿಕ್ಕಿದೆ. ಬಿಜೆಪಿ ಬಿಬಿಎಂಪಿಯಲ್ಲೂ ಆಪರೇಷನ್ ಕಮಲ ಮಾಡಲು ಹೋಗಿ ಮಣ್ಣುಮುಕ್ಕಿದೆ ಇದರಿಂದ ಕಾಂಗ್ರೆಸ್, ಜೆಡಿಎಸ್ ಬಲ ಹೇಗಿದೆ ಎನ್ನುವುದು ಎಲ್ಲರಿಗೂ ತಿಳಿದಂತಾಯಿತು. ಎಂದು ತಿಳಿಸಿದ್ದಾರೆ.

             ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link