ಬೆಂಗಳೂರು:
ಆನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಪಾಲ ವಜುಬಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಪೊರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವಯೋಸಹಜ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಡಿಸ್ಚಾರ್ಜ್ ಆದ ಬಳಿಕ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು, ವೈದ್ಯರ ಚಿಕಿತ್ಸೆಯಿಂದಾಗಿ ನಾನು ಆರೋಗ್ಯವಾಗಿದ್ದೇನೆ. ನವೆಂಬರ್ 24 ರಂದು ನಾನು ಆಸ್ಪತ್ರೆಗೆ ದಾಖಲಾಗಿದ್ದೆ. ನವೆಂಬರ್ 25 ರಂದು ಬೈಪಾಸ್ ಸರ್ಜರಿಯಾಗಿದೆ. ಈಗ ಆರೋಗ್ಯವಾಗಿದ್ದೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ