ಬೆಂಗಳೂರು :
ಶಾಸಕರಿಗೆ ಮತ್ತು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಕಾಂಗ್ರೆಸ್‌ನ ಐವರು ಶಾಸಕರಿಗೆ ಈಗಾಗಲೇ ಸೋಂಕು ದೃಢಪಟ್ಟಿದೆ. ಅಲ್ಲದೆ, ಕೆಪಿಸಿಸಿ ಕಚೇರಿಯ ನಾಲ್ವರು ಸಿಬ್ಬಂದಿಗೂ ಸೋಂಕು ಕಾಣಿಸಿಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಓಡಾಡಿದ ಶಾಸಕರಿಗೆ ಮತ್ತು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಕೆಪಿಸಿಸಿಯ ಹಳೆ ಮತ್ತು ಹೊಸ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧಿಕಾರಿಗಳು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
