ಮೈಸೂರು:
ನೀರು ತರಲು ಹೋಗಿದ್ದಾಗ ಲಕ್ಷ್ಮಣ ತೀರ್ಥ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಕೂಡ್ಲುರು ಎಂಬಲ್ಲಿ ನಡೆದಿದೆ.
19 ವರ್ಷದ ಧನುಶ್ ಮೃತ ದುರ್ದೈವಿ. ಈತ ಸೋದರಮಾವನ ತಿಥಿ ಕಾರ್ಯಕ್ಕೆ ಬಂದಿದ್ದ ಧನುಶ್, ಸಮಾಧಿ ಸ್ವಚ್ಛಗೊಳಿಸಲು ನೀರು ತರಲು ಲಕ್ಷ್ಮಣ ತೀರ್ಥ ನದಿಗೆ ತೆರಳಿದ್ದಾಗ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ಶವ ಶೋಧನೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ