ಬೆಂಗಳೂರು :
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ನವೀನ್ನನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಕಾರಣವಾಗಿದ್ದು, ಆರೋಪಿ ನವೀನ್ ಎಂಬಾತ ಫೇಸ್ ಬುಕ್ ನಲ್ಲಿ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಎಂಬುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ, ಸ್ಥಳ ಮಹಜರು ನಡೆಸಿದ್ದ ಪೊಲೀಸರು, ಇಂದು ವೀಡಿಯೋ ಕಾನ್ಫೆರೆನ್ಸ್ ಮೂಲಕ ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.
ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ 11ನೇ ಎಸಿಎಂಎಂನ ನ್ಯಾಯಾಧೀಶರು, ಅವಹೇಳನಕಾರಿ ಪೋಸ್ಟ್ ಆಗಿದ್ದ ಆರೋಪಿ ನವೀನ್ ಗೆ 14 ದಿನಗಳ ನ್ಯಾಯಂಗ ಬಂದನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ