ಬೆಂಗಳೂರು:
ಐಎಂಐ ಬಹುಕೋಟಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್‌ಐಟಿ ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ಮತ್ತು ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೂ ಸಂಕಷ್ಟ ಎದುರಾಗಿದೆ.
Today SIT probing the #IMA case detained @rroshanbaig for questioning at the BIAL airport while he was trying leave along with @BSYBJP's PA Santosh on a chartered flight to Mumbai. I was told that on seeing the SIT, Santhosh ran away while the team apprehended Mr. Baig. 1/2 pic.twitter.com/MmyH4CyVfP
— H D Kumaraswamy (@hd_kumaraswamy) July 15, 2019
ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಎಸ್‌ಐಟಿ ತಂಡವು ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆಯಲು ಹೋದಾಗ ಅವರ ಜೊತೆ ಇದ್ದ ಸಂತೋಶ್ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸಂತೋಶ್ ಮಾತ್ರವಲ್ಲದೆ ಆಗ ಸ್ಥಳದಲ್ಲಿ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಸಹ ಉಪಸ್ಥಿತರಿದ್ದರು ಎಂದು ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವರು ಪರಾರಿಯಾಗಲು ಬಿಜೆಪಿಯು ಸಹಕರಿಸಿ, ‘ಕುದುರೆ ವ್ಯಾಪಾರದ’ ಮೂಲಕ ಸರ್ಕಾರವನ್ನು ಅಲುಗಾಡಿಸಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ಆಕ್ರೋಶ ಹೊರಹಾಕಿದ್ದಾರೆ.
ಆರೋಪಿ ಪರಾರಿಗೆ ಸಹಾಯ ಮಾಡಿದ ಆರೋಪದಲ್ಲಿ ಯಡಿಯೂರಪ್ಪ ಪಿಎ ಸಂತೋಶ್ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಎಸ್‌ಐಟಿಯು ನೊಟೀಸ್ ನೀಡುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ