ಬೆಂಗಳೂರು :
ರಾಜ್ಯದಲ್ಲಿ ಕರೋನಾ ಏಕಾಏಕಿ ಹೆಚ್ಚುತ್ತಿರುವ ಕಾರಣದಿಂದಾಗಿ ಬ್ಯಾಂಕುಗಳ ಕೆಲಸದ ಸಮಯದಲ್ಲಿ ಬದಲಾವಣೆ ಮತ್ತು ಕೆಲಸದ ಅವಧಿಯನ್ನ ಕಡಿತಗೊಳಿಸಲಾಗಿದೆ.
ಹೌದು, ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಬ್ಯಾಂಕುಗಳ ವ್ಯವಹಾರಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ನಡೆಯಲಿವೆ.
ಏಪ್ರಿಲ್ 22 ರಿಂದ ಮೇ. 31 ರವರೆಗೆ ಬ್ಯಾಂಕುಗಳ ವ್ಯವಹಾರಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ. ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಆಡಳಿತಾತ್ಮಕ ಕೆಲಸಗಳು ನಡೆಯುತ್ತಿದ್ದವು. ಆದರೆ, ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿ ಹಾಜರಾತಿಯನ್ನು ಶೇ. 50 ಕ್ಕೆ ಇಳಿಸಿರುವುದರಿಂದ ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ