ಚಿತ್ರದುರ್ಗ:
ಇಲ್ಲಿನ ಮುರುಘಾ ಮಠ ಪ್ರದಾನ ಮಾಡುವ ಬಸವಶ್ರೀ ಪ್ರಶಸ್ತಿಗೆ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.
‘ಸಾಹಿತ್ಯ ಕ್ಷೇತ್ರಕ್ಕೆ ಚಂಪಾ ಅವರು ನೀಡಿದ ಕೊಡುಗೆ ಹಾಗೂ ಕನ್ನಡ ಭಾಷೆ ಕಟ್ಟುವ ಕೆಲಸವನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ 7 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಹನ್ನೆರಡನೇ ಶತಮಾನದ ಬಸವಾದಿ ಪ್ರಮಥರ ತತ್ತ್ವಚಿಂತನೆ, ಸಾಮಾಜಿಕ ಆಂದೋಲನ ಮತ್ತು ವಚನ ಸಾಹಿತ್ಯವನ್ನು ಕುರಿತು ವಿಶೇಷ ಅಧ್ಯಯನದಲ್ಲಿ ತೊಡಗಿ ಗ್ರಂಥ ರಚಿಸುವ ವಿದ್ವಾಂಸರಿಗೆ ಹಾಗೂ ಶರಣರ ಆದರ್ಶಗಳನ್ನಾದರಿಸಿ ಋಜುಮಾರ್ಗದಲ್ಲಿ ನಡೆಯುವ ಮಹನೀಯರಿಗೆ ಪ್ರದಾನ ಮಾಡುವ ಸಲುವಾಗಿ ಈ ಪ್ರಶಸ್ತಿಯನ್ನು ಶ್ರೀ ಮುರುಘಾಮಠ ಸ್ಥಾಪಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ