ಬೆಂಗಳೂರು :
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಿಸಿದ್ದು, ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಲಾಗಿದೆ.
15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ಸೆ. 27ಕ್ಕೆ ನಡೆಯಲಿರುವ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಗರದ ಮತದಾರರ ಮೇಲೆ ಪ್ರಭಾವ ಬೀರಲಿದೆ.
ಅಲ್ಲದೇ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಪ್ರಾದೇಶಿಕ ಚುನಾವಣೆ ಆಯುಕ್ತ ಹರ್ಷಗುಪ್ತ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
