ಬೆಳಗಾವಿ :
ರೈತರೊಂದಿಗೆ ಹೋರಾಟಕ್ಕಿಳಿದಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಸೇರಿ ಹದಿನೈದಕ್ಕೂ ಅಧಿಕ ರೈತರು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಸಮೀಪದ ಹಲಗಾದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ವಿರೋಧಿಸಿ ನಡೆಸುತ್ತಿದ್ದ ಪ್ರತಿ ಭಟನೆಯಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಸೇರಿದಂತೆ ಹಲವು ರೈತರು ಭಾಗಿಯಾಗಿದ್ದರು.
ಒಳಚರಂಡಿ ನೀರು ಶುದ್ದೀಕರಣ ಘಟಕಕ್ಕೆ ರೈತರು ಜಮೀನು ಕೊಡಲು ನಿರಾಕರಣೆ ಮಾಡಿದ್ದು, ಪೊಲೀಸ್ ಪೋರ್ಸ್ ನೊಂದಿಗೆ ಕಾಮಗಾರಿ ಆರಂಭಿಸಲು ಜಿಲ್ಲಾಡಳಿತದ ಅಧಿಕಾರಿಗಳು ಆಗಮಿಸಿದ್ದರು. ಜಮೀನು ಖರೀದಿ ಪ್ರಕ್ರಿಯೆ ಮುಗಿಸಿ, ರೈತರಿಗೆ ಯಾವುದೇ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಡ್ಡಿ ಪಡಿಸಲು ರೈತರು ಸೇರಿದ್ದು, ರೈತರ ಹೋರಾಟಕ್ಕೆ ಶಾಸಕಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮುಂದಾಳತ್ವ ವಹಿಸಿದ್ದರು.
ಈ ವೇಳೆ ಮೃಣಾಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಮೃಣಾಲ್ ಸೇರಿ 15ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನೆಲ್ಲ ವಶಕ್ಕೆ ಪಡೆದು ಎಪಿಎಂಸಿ ಪೊಲೀಸ್ ಠಾಣಗೆ ಕರದೊಯ್ದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ