ಚಿಕ್ಕೋಡಿ:

ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದ ಪತಿ ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಗೋಪಾಲ ಹಾದಿಮನಿ (46), ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿ (8) ಮೃತ ದುರ್ದೈವಿಗಳು.
ಜುಲೈ 6 ರಂದು ಗೋಪಾಲ್ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದ ಪತಿ ಹಾಗೂ ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಕೇಶ್ವರ ಪೊಲೀಸರ ದೌಡಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








