ಬೆಳಗಾವಿ:
ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ಮಾಜಿ ಶಾಸಕರೊಬ್ಬರ ಪುತ್ರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಳಗಾವಿಯ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಅವರ ಪುತ್ರ 38 ವರ್ಷದ ಸಾಗರ್ ಸಾಂಬಾಜಿ ಪಾಟೀಲ್ ಸೋಮವಾರ ರಾತ್ರಿ ಸ್ನೇಹಿತರ ಜೊತೆ ಬೆಂಗಳೂರಿನಿಂದ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಳಗಾವಿಗ ಹೊರಟಿದ್ದರು. ಶ್ರೀರಾಮಪುರದ ಬಳಿ ಶೌಚಗೃಹಕ್ಕೆ ತೆರಳಿದ್ದ ಸಾಗರ್ ಅಲ್ಲಿಂದ ಬಂದು ರೈಲು ಹತ್ತುವ ಸಂದರ್ಭದಲ್ಲಿ ಕಾಲು ಜಾರಿ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.
ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸಾಗರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಟಿ ರೈಲ್ವೆ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ