ಬಳ್ಳಾರಿ :
ರಾಜ್ಯ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಬಳ್ಳಾರಿ ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರಲು ನಿರ್ಧರಿಸಿದ್ದು, ತಮ್ಮ ಆಪ್ತರಿಗೆ, ಕಾರ್ಯಕರ್ತರಿಗೆ ಈಗಾಗಲೇ ಬಿಜೆಪಿ ಸೇರುವ ಕುರಿತು ಅಭಿಪ್ರಾಯ ತಿಳಿಸುವಂತೆ ಸಂದೇಶ ಕಳಿಸಿದ್ದಾರೆ. ಮೊಳಕಾಲ್ಮೂರು ಸಂಸದ ಮತ್ತು ಸಚಿವ ಬಿ. ಶ್ರೀರಾಮುಲು ಜೊತೆ ಈ ಕುರಿತು ಅನಿಲ್ ಲಾಡ್ ಮಾತುಕತೆ ನಡೆಸಿದ್ದಾರೆ.
ಮೊಳಕಾಲ್ಮೂರು ಸಂಸದ ಮತ್ತು ಸಚಿವ ಬಿ. ಶ್ರೀರಾಮುಲು ಜೊತೆ ಈ ಕುರಿತು ಅನಿಲ್ ಲಾಡ್ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲು ಅನಿಲ್ ಲಾಡ್ ಪ್ರಯತ್ನ ನಡೆಸುತ್ತಿದ್ದಾರೆ. ಯಡಿಯೂರಪ್ಪ ಒಪ್ಪಿಗೆ ಪಡೆದ ಬಳಿಕ ಬಿಜೆಪಿ ಸೇರುವ ಕುರಿತು ಅವರು ಅಧಿಕೃತ ಘೋಷಣೆ ಮಾಡುವ ನಿರೀಕ್ಷೆ ಇದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅನಿಲ್ ಲಾಡ್, “ಬಿಜೆಪಿ ಸೇರಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಆದರೆ, ಯಾರಿಗೂ ಹೇಳದೆ ಬೆನ್ನಿಗೆ ಚೂರಿ ಹಾಕಿ ಹೋಗುವುದಿಲ್ಲ. ಕಾರ್ಯಕರ್ತರ ಜೊತೆ ಮಾತನಾಡಿಯೇ ಹೋಗುವೆ” ಎಂದು ಹೇಳಿದ್ದಾರೆ.
2018ರ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಪಕ್ಷದ ವೇದಿಕೆಯಲ್ಲಿ ಅವರು ಅಷ್ಟಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿ ಅನಿಲ್ ಲಾಡ್ ಬಿಜೆಪಿ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
